ಸುಳ್ಯದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ಇದೀಗ ಬಂದರು, ಮೀನುಗಾರಿಕೆ, ಒಳನಾಡು ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿದ ಎಸ್.ಅಂಗಾರ ಅವರಿಗೆ ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಜ.25 ರಂದು ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಸಚಿವ ಎಸ್.ಅಂಗಾರ ಮತ್ತು ವೇದಾವತಿ ದಂಪತಿಗಳನ್ನು ಈ ಅದ್ದೂರಿ ಕಾರ್ಯಕ್ರಮದಲ್ಲಿ ಪೇಟ ತೊಡಿಸಿ, ಹೂಮಾಲೆ ಹಾಕಿ, ಬುದ್ಧನ ಪ್ರತಿಮೆ ನೀಡಿ ಸನ್ಮಾನಿಸಲಾಯಿತು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸನ್ಮಾನಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಹಿಸಿದ್ದರು. ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ,ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ .ಡಾ. ಕೆ.ವಿ.ಚಿದಾನಂದ ಮಾತನಾಡಿದರು. ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜ, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಅಭಿನಂದನಾ ಸಮಿತಿಯ ಅಧ್ಯಕ್ಷ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಭಿನಂದನಾ ಸಮಿತಿಯ ಸಂಚಾಲಕ ಎ.ವಿ.ತೀರ್ಥರಾಮ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕ ವಂದಿಸಿದರು. ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.
- Friday
- November 22nd, 2024