Ad Widget

ಸಚಿವ ಎಸ್. ಅಂಗಾರರಿಂದ ಉಡುಪಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ

ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಖಾತೆಯ ನೂತನ ಸಚಿವ ಎಸ್. ಅಂಗಾರ ಅವರು ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ಧ್ವಜಾರೋಹಣ ನೆರವೇರಿಸಿದರು.
ಬಳಿಕ 72ನೇ ಗಣರಾಜ್ಯೋತ್ಸವದ ಪ್ರಯುಕ್ತ ಶುಭಹಾರೈಸಿದರಲ್ಲದೆ ಹುತಾತ್ಮ ಸೈನಿಕರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವ ಅಂಗಾರರು ಜ.25ರಂದು ಸಂಜೆಯಿಂದ ರಾತ್ರಿಯವರೆಗೆ ಸುಳ್ಯದಲ್ಲಿ ನಡೆದ ಹುಟ್ಟೂರ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ರಾತ್ರಿ ಉಡುಪಿಗೆ ತೆರಳಿದ್ದರು.ಇಂದು ಸಚಿವರು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ರಾತ್ರಿ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading