ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ
ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ.26ರಿಂದ 29ರವರೆಗೆ ನಡೆಯಲಿದ್ದು, ಜ. 26 ರಂದು ಆರಂಭಗೊಂಡಿತು.
ಜ. 26ರಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗತಂಬಿಲ ನೆರವೇರಿತು. ಮೂರುಕಲ್ಲಡ್ಕದಲ್ಲಿ ಸರ್ಪಸಂಸ್ಕಾರ ಹಾಗೂ ನಾಗತಂಬಿಲ ನೆರವೇರಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಜ. 27 ರಂದು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ಮಹಾಗಣಪತಿ ಹವನ, ಚಂಡಿಕಾ ಹವನ ಮತ್ತು ದುರ್ಗಾಪೂಜೆ, ಶ್ರೀ ದೈವಗಳಿಗೆ ವಿಶೇಷ ತಂಬಿಲ ಸೇವೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಜ. 28 ಮತ್ತು 29 ರಂದು ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. 28 ರಂದು ಬೆಳಗ್ಗೆ 5ಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಡುವುದು, 7 ಗಂಟೆಗೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ ಮುಡಿ ದೈವಗಳ ನೇಮ, 29ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಡಲಿದೆ. ಬೆಳಿಗ್ಗೆ 8ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ ಮತ್ತು ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ. ಬೆಳಗ್ಗೆ 9ಕ್ಕೆ ಕಲ್ಲಮಾಡದ ಬಳಿ ಶಿರಾಡಿ , ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ಮಧ್ಯಾಹ್ನ12.30 ಕ್ಕೆ ಪ್ರಸಾದ ವಿತರಣೆ , ಅನ್ನಸಂತರ್ಪಣೆ, ಅಪರಾಹ್ನ 2.30 ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ 5.00 ರಿಂದ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.