ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಾಯುಸೇನೆಯ ನಿವೃತ್ತ ಸೈನಿಕರು, ಕೊಡುಗೈ ದಾನಿಗಳು, ಶಿಕ್ಷಣ ಪ್ರೇಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಅವರು ದೇಶ ಕಾಯುವ ಸೇವೆಯಲ್ಲಿನ ರೋಮಾಂಚಕಾರಿ ಕ್ಷಣಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ದೇಶಾಭಿಮಾನದ ಮಾತುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನತೆ ಸೈನಿಕರಾಗುವಂತೆ ಕರೆನೀಡಿದರು. ಮುಖ್ಯ ಶಿಕ್ಷಕ ಗೋಪಿನಾಥ ಎಂ.ಮುಖ್ಯ ಅತಿಥಿಗಳನ್ನು ಪರಿಚಯಸಿ ದಿಕ್ಸೂಚಿ ಭಾಷಣ ಮಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಣೆ ನಡೆಯಿತು. ವಿಖ್ಯಾತ್, ವಿನ್ಯಾಸ್, ನುಸ್ರ, ರೋಹಿತ್, ಅಹ್ಮದ್ ಸುಹೈಲ್ ದತ್ತಿನಿಧಿ ಬಹುಮಾನ ಸ್ಪೀಕರಿಸಿದರು. ಶಿಕ್ಷಕಿ ಶ್ರೀಮತಿ ಪ್ರಭಾವತಿ ಬಹುಮಾನ ವಿತರಣೆ ಮಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶಾಲೆಯ ಹಳೆ ವಿದ್ಯಾರ್ಥಿ ರಾಹುಲ್ ಅಡ್ಪಂಗಾಯ ಮತ್ತು ಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ರಾಜ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರು ವೇದಿಕೆಯಲ್ಲಿ ಉಸಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಅನ್ನಪೂರ್ಣೇಶ್ವರಿ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಾಮುಖ್ಯತೆ ತಿಳಿಸಿದರು. ಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ರೇವತಿ ಧನ್ಯವಾದ ಸಮರ್ಪಣೆ ಮಾಡಿದರು. ಶಿಕ್ಷಕ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರ್ವಹಿಸಿದರು.
- Friday
- November 22nd, 2024