Ad Widget

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ – ಸನ್ಮಾನ

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ.26 ರಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಾಂಶುಪಾಲರಾದ ಹಸೀನಾಬಾನು ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಕಳೆದ ಹತ್ತು ವರ್ಷದಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ , ಇದೀಗ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿಹೊಂದಿ ಸುಳ್ಯ ಅಕ್ಷರದಾಸೋಹ ಕಛೇರಿಗೆ ತೆರಳಿರುವ ಶೋಭಾಶ್ರೀ ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಕಳೆದ ಶೈಕ್ಷಣಿಕ ವರ್ಷದಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣವಾಗಿರುವ 13 ವಿದ್ಯಾರ್ಥಿಗಳನ್ನು ಅಭಿನಂದನಾ ಫಲಕದೊಂದಿಗೆ ಗೌರವಿಸಲಾಯಿತು. ವಿದ್ಯಾರ್ಥಿಗಳನ್ನು ನಿವೃತ್ತ ಕಸ್ಟಂಮ್ಸ್ ಅಧಿಕಾರಿಯಾಗಿರುವ ಕುರುಮುಡೇಲು ರಾಮಕೃಷ್ಣ ಭಟ್ ರವರು ಗೌರವಿಸಿದರು. ಸಂಸ್ಥೆಯ ಶಿಕ್ಷಕರಾದ ರಾಮಚಂದ್ರ ಭಟ್ ರವರು ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಸಭೆಯಲ್ಲಿ ಹೈಸ್ಕೂಲ್ ವಿಭಾಗದ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ, ಕಾಲೇಜು ವಿಭಾಗದ ಕಾರ್ಯಾಧ್ಯಕ್ಷರಾದ ಬಾಳಪ್ಪ ,ಉಪಪ್ರಾಂಶುಪಾಲರಾದ ಉಮಾಕುಮಾರಿ ಉಪಸ್ಥಿತರಿದ್ದರು. ಸಭಾಧ್ಯಕ್ಷತೆಯನ್ನು ಬಾಳಪ್ಪ ರವರು ವಹಿಸಿದ್ದರು. ವಿಶ್ವನಾಥ್ ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading