ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭವು ಫೆ. 13 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಶಾಂತರಾಮ ಕಣಿಲೆಗುಂಡಿ ವಹಿಸಿದ್ದರು. ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿಯವರು ಕಾರ್ಯಕ್ರಮದ ಉದ್ಘಾಟನೆಗೈದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಇಲ್ಲಿನ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಯಾದ ಮಂಜುನಾಥ್.ಜಿ, ಸಿ.ಬಿ.ಸಿ. ಉಪಾಧ್ಯಕ್ಷ ಬಾಳಪ್ಪ.ಕೆ.ಸಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ಅಕ್ಷಯ ಕೃಷ್ಣ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀಮತಿ
ಉಮಾಕುಮಾರಿ ಸ್ವಾಗತಿಸಿ, ಶಿಕ್ಷಕರಾದ ರಾಮಚಂದ್ರ ಭಟ್.ಎಂ ವಂದಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಪುಷ್ಪಾವತಿ.ಪಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.