ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 22 ಗ್ರಾಮಗಳನ್ನೊಳಗೊಂಡ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ ಅಧ್ಯಕ್ಷರಾಗಿ ಪೆರಾಜೆ ಗ್ರಾಮದ ನಾಗೇಶ್ ಕುಂದಲ್ಪಾಡಿ ಇವರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಇವರು ಪೆರಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಡಿಕೇರಿ ತಾ.ಪಂ ಸದಸ್ಯರಾಗಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.