
ಕನಕಮಜಲು ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಕಾರ್ಯಕರ್ತ, ಕಾಂಗ್ರೇಸ್ ಮುಖಂಡ ಕನಕಮಜಲು ನಿವಾಸಿಯಾದ ಹಾಜಿ ಬೀರಾ ಮೋಯ್ದಿನ್‌ರವರು ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೭೦ ವರ್ಷ ವಯಸ್ಸಾಗಿತ್ತು.
ಮೃತರು ಕನಕಮಜಲು ಪ್ರಾ.ಕೃ.ಪ.ಸ.ಸಸಂಘದ ಅಧ್ಯಕ್ಷರು ಹಾಗೂ ಗ್ರಾ.ಪಂ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಹಾಗೂ ಹಲವು ಸಂಘ ಸಂಸ್ಥೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಪುತ್ರ ಮಹಮ್ಮದ್ ಪವಾಝ್, ಮೂವರು ಪುತ್ರಿಯರು ಹಾಗೂ ಸಹೋದರ ಇಬ್ರಾಹಿಂ ಖಾಸೀಂ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.