
ವಿಶ್ವ ಹಿಂದೂ ಪರಿಷತ್ ವತಿಯಿಂದ ಬೆಳ್ಳಾರೆಯಲ್ಲಿ ಎ.18 ರಂದು ನಡೆಯುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಸಭೆಯು ಮಾ.12 ರಂದು ಪೆರುವಾಜೆಯ ಜೆ.ಡಿ. ಸಮುದಾಯ ಭವನದಲ್ಲಿ ನಡೆಯಿತು. ಭಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಪೂರ್ವತಯಾರಿ ರೂಪುರೇಷೆಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ವಿಹಿಂಪ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ ಉಪಸ್ಥಿತರಿದ್ದರು.
