ಸುಳ್ಯ ವಿಧಾನ ಸಭಾ ಕ್ಷೇತ್ರ ಕ್ಕೊಳಪಟ್ಟ ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಕೆಲವು ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸಲು ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಈಶ್ವರಪ್ಪರವರಿಗೆ, ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ನೇತೃತ್ವದಲ್ಲಿ ಸುಳ್ಯ ಮಂಡಲ ವತಿಯಿಂದ ಮನವಿ ಸಲ್ಲಿಸಲಾಯಿತು. ಅನುದಾನ ನೀಡುವ ಭರವಸೆಯನ್ನು ಮಾನ್ಯ ಸಚಿವರು ನೀಡಿದ್ದಾರೆ ಎಂಬುದಾಗಿ ಮಂಡಲ ಅಧ್ಯಕ್ಷರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ ಕಂಜಿಪಿಲಿ, ಭಾ. ಜ. ಪಾ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ, ಮಂಡಲ ಕಾರ್ಯದರ್ಶಿ ಶ್ರೀನಾಥ್ ರೈ ಬಾಳಿಲ ಉಪಸ್ಥಿತರಿದ್ದರು.
- Friday
- November 22nd, 2024