ದ.ಕ.ಜಿಲ್ಲಾಡಳಿತ, ತಾಲೂಕು ಆಡಳಿತ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ನೆಹರೂ ಯುವ ಕೇಂದ್ರ ಮಂಗಳೂರು ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮರ ಬೆಳ್ಳಾರೆ ವಿಜಯೋತ್ಸವ ಕಾರ್ಯಕ್ರಮ ಮಾ.27ರಂದು ನಡೆಯಿತು.
ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮುಖ್ಯ ಅತಿಥಿಯಾಗಿದ್ದರು. ಹಿರಿಯ ಸಾಹಿತಿ, ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ದಿಕ್ಸೂಚಿ ಭಾಷಣ ಮಾಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ತಾ.ಪಂ.ಸದಸ್ಯೆ ನಳಿನಾಕ್ಷಿ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಉಪಾಧ್ಯಕ್ಷೆ ಗೌರಿ ನೆಟ್ಟಾರು, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಳ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್, ಜಿಲ್ಲಾ ಯುವಜನ ಇಲಾಖೆಯ ಸಮನ್ವಯಾಧಿಕಾರಿ ರಘುವೀರ್ , ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು, ಯುವ ಜನ ಒಕ್ಕೂಟದ ಸುರೇಶ್ ರೈ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ತಹಶಿಲ್ದಾರ್ ಕು. ಅನಿತಾಲಕ್ಷ್ಮಿ ಸ್ವಾಗತಿಸಿದರು. ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರೂಪಿಸಿದರು.