ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಪೆರುವಾಜೆ ಇದರ ವತಿಯಿಂದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇವುಗಳ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಕ್ರಮವು ದರ್ಖಾಸ್ತು ಸ.ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಅಶ್ವಥಿಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ಅವರು ಮಹಿಳಾ ಮತ್ತು ಮಕ್ಕಳ ಆರೋಗ್ಯ ಹಾಗೂ ವಹಿಸಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ದರ್ಖಾಸ್ತು ಸ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಲ್ಲವಿ ಮತ್ತು ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಇಲ್ಲಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕು.ಅರ್ಚನಾ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ದರ್ಖಾಸ್ತು ಸ.ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಸುಜಾತ ಕಾರ್ಯಕ್ರಮದ ಕುರಿತು ಮಾತನಾಡಿದರು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿ ಸುಜಾತ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಕು.ಲಿಖಿತಾ ಸ್ವಾಗತಿಸಿ, ವಂದಿಸಿದರು. ಶಿವಪ್ರಸಾದ್.ಎಂ ಕಾರ್ಯಕ್ರಮ ನಿರೂಪಿಸಿದರು.
- Sunday
- November 24th, 2024