Ad Widget

ಮರಕತ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರ ಶ್ರೀ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿಯವರು ಊರಿನ ಹಾಗೂ ಭಕ್ತಾಭಿಮಾನಿಗಳ ನೆರವಿನೊಂದಿಗೆ ಅಂದಾಜು 1೦ ಲಕ್ಷದ ವೆಚ್ಚದಲ್ಲಿ ನಿರ್ಮಿಸಿದ್ದು, ಇದರ ಉದ್ಘಾಟನೆ ಮಾ. 28 ರಂದು ನಡೆಯಿತು.

. . . . . . . . .

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ನೂತನ ದ್ವಾರವನ್ನು ಉದ್ಘಾಟಿಸಿದರು. ಮರಕತ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಪದ್ಮನಾಭ ಪರಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಚಿವ ಅಂಗಾರರ ಪತ್ನಿ ಶ್ರೀಮತಿ ವೇದಾವತಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರಮೀಳಾ ಭಾಸ್ಕರ, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ, ಮಾಜಿ ಸದಸ್ಯ ವೆಂಕಟ್ರಮಣ ಕೊಚ್ಚಿ, ದೈವಗಳ ಪರಿಚಾರಕ ಕರುಣಾಕರ ಮರಕತ, ದೇವಸ್ಥಾನದ ಹಾಲಿ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾ.ಪಂ. ಸದಸ್ಯರು, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ವಿಜಯಕುಮಾರ್ ಚಾರ್ಮಾತ, ಉಪಾಸನಾ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ವರಲಕ್ಷ್ಮಿ ಕೋಟೆ ಸ್ವಾಗತಿಸಿ, ಚಂದ್ರಕಲಾ ಉತ್ರಂಬೆ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading