Ad Widget

ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಸರಕಾರ ಅನುಮತಿ


ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

. . . . . .

ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ ಇರಲಿದ್ದು, ಅವುಗಳಿಗೆ ವಿನಾಯತಿ ನೀಡಿಲ್ಲ. ಎಪಿಎಂಸಿ, ದಿನಸಿ ಅಂಗಡಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅವಕಾಶ ನೀಡಿದೆ.

ಮಾರುಕಟ್ಟೆಗಳಲ್ಲಿ ಜನಸಂದಣಿ ತಪ್ಪಿಸಲು ಸರ್ಕಾರ ಈ ಹೊಸ ನಿರ್ಧಾರ ಕೈಗೊಳ್ಳಲಾಗಿದ್ದು, ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದ್ದು, ಕೊವಿಡ್​ ಮಾರ್ಗಸೂಚಿ ಪಾಲಿಸಿ ವ್ಯಾಪಾರ ಮಾಡಬೇಕು ಎಂದು ತಿಳಿಸಿದೆ. ವ್ಯಾಪಾರಿಗಳು ಮಾರುಕಟ್ಟೆ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂಬ ಶರತ್ತಿನೊಂದಿಗೆ ಅವಕಾಶ ಒದಗಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!