Ad Widget

ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

. . . . .

ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!