
ಕೊರೋನಾ ನಿಯಂತ್ರಣಕ್ಕಾಗಿ ದ.ಕ.ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲಾಗುವುದು.
ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶವಿರುವುದಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗುವುದು. ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ.