ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಕೊಲ್ಲಮೊಗ್ರದಲ್ಲಿ ಎರಡು ಕೊರೋನಾ ಬಾಧಿತರ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸವನ್ನು ನಿರಂತರ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ, ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಹರ್ಷ ಅಡ್ನೂರುಮಜಲು ಹಾಗೂ ಲಕ್ಷ್ಮಣ ಐನೆಕಿದು ಉಪಸ್ಥಿತರಿದ್ದರು.
*✍ವರದಿ :- ಉಲ್ಲಾಸ್ ಕಜ್ಜೋಡಿ*