ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೋರೋನ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
ಕೋರೋನ ಮೂರನೇ ಅಲೆಯ ಮುನ್ಸೂಚನೆ ಇದ್ದು ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಲ್ಲಿ ಭಯವನ್ನುಂಟು ಮಾಡಿದೆ. ಇದರ ನಡುವೆ ಪರೀಕ್ಷೆಯನ್ನು ಮಾಡುವುದಾದರೆ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಿ ವ್ಯಾಕ್ಸಿನ್ ನೀಡಬೇಕು ಅಥವಾ ಪರೀಕ್ಷೆಯನ್ನೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಒಂದು ವರ್ಷದಿಂದ ಕೋರೋನ ಸೋಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದ ಸಾಕಷ್ಟು ಕಾಲೇಜುಗಳು ಬಂದಾಗಿರುವುದರಿಂದ ಸರಕಾರದಿಂದ ಸಿಗಬೇಕಾಗಿದ್ದ ವಿದ್ಯಾರ್ಥಿವೇತನ, ಶೈಕ್ಷಣಿಕ ಸಾಲ ವಿದ್ಯಾರ್ಥಿಗಳಿಗೆ ಲಭಿಸಿಲ್ಲ, ಕೇವಲ ಆನ್ಲೈನ್ ತರಗತಿ ಮುಖಾಂತರ ಕ್ಲಾಸ್ ಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳ ಶುಲ್ಕದಲ್ಲಿ ಯಾವುದೇ ರಿಯಾಯಿತಿಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಲಿಲ್ಲ, ಆದರಿಂದ ಪೂರ್ಣಪ್ರಮಾಣದ ಶುಲ್ಕವನ್ನು ಪಾವತಿಸಲು ಹೆತ್ತವರಿಗೆ ತೊಂದರೆಯಾಗಿದ್ದು, ವಿದ್ಯಾರ್ಥಿ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು ಎಂದರು.
ಕೋವಿಡ್ -19ನಿಂದ ಅದೆಷ್ಟೋ ವಿದ್ಯಾರ್ಥಿಗಳು ಹೆತ್ತವರನ್ನು ಕುಟುಂಬಸ್ಥರನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಅವರ ಮುಂದಿನ ಸಂಪೂರ್ಣ ಶಿಕ್ಷಣವನ್ನು ಸರಕಾರ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
- Friday
- November 1st, 2024