Ad Widget

ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಿಟ್ ವಿತರಿಸಿ‌ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಈ ಗೌರವ ಮತ್ತು ಸಹಕಾರ ಅಮೂಲ್ಯವಾದುದು ಎಂದು ಹೇಳಿದರು. ಎಸ್ ಸಿಡಿಸಿಸಿ ಬ್ಯಾಂಕ್ ಸಂಕಷ್ಟದ ಸಮಯದಲ್ಲಿ ಸಮಾಜದ ಎಲ್ಲಾ ವರ್ಗಗಳಿಗೂ ಸ್ಪಂದಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಅವರು ಹೇಳಿದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಮಾತನಾಡಿ ಕೋವಿಡ್ ಭೀತಿಯ ಇಂದಿನ ದಿನಗಳಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಬ್ಯಾಂಕ್ ಈ ಮೂಲಕ ಗೌರವ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು. ಕೇಂದ್ರ ಸಹಕಾರಿ ಬ್ಯಾಂಕ್ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳ ಮೂಲಕ ಸಮಾಜಕ್ಕೆ ಸ್ಪಂದಿಸುತ್ತಿದೆ. ಸಮಾಜದ ಹಲವು ವಿಭಾಗಕ್ಕೆ ಸಹಾಯ, ಸಹಕಾರ ನೀಡುತಿದೆ ಎಂದರು.

. . . . . . . . .

ಎಸ್ ಸಿಡಿಸಿಸಿ ಬ್ಯಾಂಕ್ ಪುತ್ತೂರು ಶಾಖಾ ವ್ಯವಸ್ಥಾಪಕ ರತ್ನಕುಮಾರ್, ಸುಳ್ಯ ಶಾಖಾ ವ್ಯವಸ್ಥಾಪಕ ವಿಶ್ವನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ತಾಲೂಕು ಸಂಘದ ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading