ಸುಳ್ಯ ತಾಲೂಕು ಪಂಚಾಯಿತ್ ವತಿಯಿಂದ ಪ್ರೆಸ್ ಕ್ಲಬ್ ನಿರ್ಮಾಣಕ್ಕೆ ಅಂಬೆಟಡ್ಕದಲ್ಲಿ ನೀಡಿರುವ ನಿವೇಶನದಲ್ಲಿ ಜು.3 ರಂದು ನೂತನ ಪ್ರೆಸ್ ಕ್ಲಬ್ ಕಟ್ಟಡ ಮತ್ತು ಪತ್ರಕರ್ತರ ಸಮುದಾಯ ಭವನಕ್ಕೆ ಶಿಲಾನ್ಯಾಸ ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ವಹಿಸಿದ್ದರು. ನಿವೇಶನ ನೀಡಲು ಪ್ರಯತ್ನಿಸಿದ ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್ ರಾವ್ ಅವರಿಗೆ ಪ್ರೆಸ್ ಕ್ಲಬ್ ವತಿಯಿಂದ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಗುತ್ತಿಗೆದಾರ ನಾರಾಯಣ ಕೇಕಡ್ಕ, ನ್ಯಾಯವಾದಿ ದಿನೇಶ್ ಮಡಪ್ಪಾಡಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ಪಿ. ಜಾನಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೃಷ್ಣ ಬೆಟ್ಟ, ಜರ್ನಲಿಸ್ಟ್ ಯೂನಿಯನ್ ತಾಲೂಕು ಅಧ್ಯಕ್ಷ ಉಮೇಶ್ ಮಣಿಕ್ಕಾರ, ನಾಗರಾಜ ಮೇಸ್ತ್ರಿ, ನ.ಪಂ. ಮಾಜಿ ಸದಸ್ಯ ಕೆ.ಎಂ. ಮುಸ್ತಫ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಂಗಮನೆಯ ಜೀವನ್ ರಾಂ ಸುಳ್ಯ, ಉಜ್ವಲ್ ಯು.ಜೆ., ಬೂಡು ರಾಧಾಕೃಷ್ಣ ರೈ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಶಂಕರ ಪೆರಾಜೆ, ಕೇಶವ ಸಿ.ಎ., ವೆಂಕಟ್ರಮಣ ಮುಳ್ಯ, ಆನಂದ ರಾವ್ ಕಾಂತಮಂಗಲ, ಮೊದಲಾದವರಿದ್ದರು. ಪುರೋಹಿತ ನಾಗರಾಜ್ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಖಜಾಂಜಿ ಯಶ್ವಿತ್ ಕಾಳಮ್ಮನೆ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪ್ರೆಸ್ ಕ್ಲಬ್ ಮತ್ತು ಪತ್ರಕರ್ತರ ಸಮುದಾಯ ಭವನ ನಿರ್ಮಾಣಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು 50 ಸಾವಿರ ರೂಗಳ ಚೆಕ್ ಹಸ್ತಾಂತರ ಮಾಡಿದರು.