ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ಹಾಸ್ಟೆಲ್ ಗಳನ್ನು ಪ್ರಾರಂಭಿಸುವ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸುವ ಬಗ್ಗೆ ಸರಕಾರಕ್ಕೆ ತಹಶಿಲ್ದಾರ್ ಮುಖಾಂತರ ಮನವಿಯನ್ನು ನೀಡಲಾಯಿತು. ಕೋವಿಡ್ ಎರಡನೆಯ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲ್ ಗಳು ಹಾಗೂ ಕಾಲೇಜುಗಳು ಕಳೆದ ಮೂರು ನಾಲ್ಕು ತಿಂಗಳುಗಳಿಂದ ಬಂದ್ ಆಗಿದ್ದವು. ಇದೀಗ ಸರಕಾರ ಕಾಲೇಜು ತೆರೆಯಲು ನಿರ್ಧರಿಸಿರುವುದರಿಂದ ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ ಗಳನ್ನೇ ಅವಲಂಬಿತವಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಯ ವ್ಯಾಪ್ತಿಯ ಬರುವ ಎಲ್ಲಾ ಹಾಸ್ಟೆಲ್ಗಳನ್ನು ತೆರೆಯಬೇಕು ಮತ್ತು ಉನ್ನತ ಶಿಕ್ಷಣ ಇಲಾಖೆಯು ಈ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ತೆಗೆದುಕೊಂಡು ಸ್ಯಾನಿಟೈಸ್ ಮಾಡಿಸಿ ಹಾಸ್ಟೆಲ್ಗಳನ್ನು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಇರಲು ಅವಕಾಶ ಮಾಡಿಕೊಡಬೇಕೆಂದು ಅಭಾವಿಪ ಆಗ್ರಹಿಸುತ್ತದೆ ಮತ್ತು ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್ ಪಾಸ್ ಸೌಲಭ್ಯ ಮಾಡಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರಕಾರಕ್ಕೆ ನೀಡಿದ ಮನವಿಯಲ್ಲಿ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಹ ಕಾರ್ಯದರ್ಶಿ ರವೀಶ್ ಕೇವಳ ,ಅಧ್ಯಯನ ಪ್ರಮುಖ್ ಭುವನ್, ಸಾಮಾಜಿಕ ಜಾಲತಾಣ ಪ್ರಮುಖ್ ಅನಿಲ್ ಕಾರ್ಯಕರ್ತರಾದ ಗಗನ್, ವಿನ್ಯಾಸ್ ,ಜನಾರ್ಧನ ಉಪಸ್ಥಿತರಿದ್ದರು.
- Thursday
- November 21st, 2024