ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್ ಗೆ ಧನ್ಯವಾದ ಸಲ್ಲಿಸಿದರು.
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರ ತಂದ ಕೀರ್ತಿ ಯಡಿಯೂರಪ್ಪನವರದು. 2007, 2008, 2018 ಮತ್ತು 2019ರಲ್ಲಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಗಾದಿಗೆ ಏರಿದ್ದರು. ಕರ್ನಾಟಕದಲ್ಲಿ ನಾಲ್ಕು ಬಾರಿ ಸಿಎಂ ಕುರ್ಚಿಗೆ ಏರಿದ ಏಕೈಕ ವ್ಯಕ್ತಿ ಬಿ.ಎಸ್.ಯಡಿಯೂರಪ್ಪ.