Ad Widget

ನಾಳೆಯಿಂದ ಕುಕ್ಕೆ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಸೇವೆಗಳು, ಅನ್ನಸಂತರ್ಪಣೆ ಆರಂಭ – ಜುಲೈ 29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆಗೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆಯಿಂದ ಸಾಂಪ್ರದಾಯಿಕ ಸೇವೆಗಳು ಆರಂಭಗೊಳ್ಳಲಿದೆ. ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29(ಗುರುವಾರ) ರಿಂದ ಪ್ರಾರಂಭಗೊಳ್ಳಲಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಬಳಿಕ ಮಧ್ಯಾಹ್ನ 3.30ರಿಂದ ರಾತ್ರಿ 8.30 ಗಂಟೆ ತನಕ ಭಕ್ತರಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ನಾಳೆಯಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಪಂಚಾಮೃತ ಮಹಾಭಿಷೇಕ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಆರಂಭವಾಗಲಿದೆ. ಭಕ್ತರಿಗೆ ಬೋಜನ ಪ್ರಸಾದ ವಿತರಣೆ ಆರಂಭವಾಗಲಿದೆ. ಅಲ್ಲದೆ ಭಕ್ತರಿಗೆ ಶ್ರೀ ದೇವಳದ ವಸತಿ ಗೃಹಗಳಲ್ಲಿ ತಂಗಲು ಅವಕಾಶ ನೀಡಲಾಗಿದೆ. ಲಡ್ಡು, ಪಂಚ ಕಜ್ಜಾಯ ಪ್ರಸಾದ, ತೀರ್ಥ ಬಾಟ್ಲಿ ವಿತರಣೆ ಆರಂಭಗೊಳ್ಳಲಿದೆ.ಜು.29 ಗುರುವಾರದಿಂದ ದೇವಳದ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಭಿಷೇಕ ಸೇವೆಗಳು ಆರಂಭಗೊಳ್ಳಲಿದೆ. ಈ ಸೇವೆಯನ್ನು ನೆರವೇರಿಸುವ ಸೇವಾರ್ಥಿಗಳು ಕನಿಷ್ಠ ಕೋವಿಡ್-19 ಪ್ರಥಮ ಡೋಸ್ ಲಸಿಕೆ ಪಡೆದಿರಬೇಕು ಮತ್ತು ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ ವರದಿ ಹಾಜರು ಪಡಿಸಬೇಕು.ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಈ ಸೇವೆಗಳ ಪ್ರತಿ ಟಿಕೇಟಿಗೆ 2 ಭಕ್ತರಿಗೆ ಮಾತ್ರ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇಷ್ಟರ ತನಕ ಒಂದು ಬ್ಯಾಚ್‌ನಲ್ಲಿ ನಡೆಯುತ್ತಿದ್ದ ಸರ್ಪಸಂಸ್ಕಾರ ಸೇವೆಯು ಗುರುವಾರದಿಂದ ಪ್ರತಿದಿನ ಎರಡು ಬ್ಯಾಚ್‌ನಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಒಂದನೇ ಸರದಿ ಹಾಗೂ ಎರಡನೇ ಸರದಿಯು 10ಗಂಟೆಗೆ ಆರಂಭಗೊಳ್ಳಲಿದೆ. ಈಗಾಗಲೇ ಸುಮಾರು 6400 ಮಂದಿ ಭಕ್ತರು ಸರ್ಪಸಂಸ್ಕಾರ ಸೇವೆಗೆ ಆನ್‌ಲೈನ್ ಮೂಲಕ ಕಾಯ್ದಿರಿಸಿದ ಕಾರಣ ಇವರಿಗೆ ಪ್ರಥಮ ಆದ್ಯತೆ ನೀಡಿ ದಿನ ಒಂದಕ್ಕೆ ತಲಾ ಎರಡು ಪಾಳಿಯಲ್ಲಿ ತಲಾ 90 ರಂತೆ ಒಟ್ಟು 180 ಸೇವೆಗಳಿಗೆ ಅವಕಾಶ ನೀಡಲಾಗಿದೆ. ಪ್ರತಿ ದಿನ 4 ಸರದಿಯಲ್ಲಿ ಒಟ್ಟು 240 ಭಕ್ತರಿಗೆ ಆಶ್ಲೇಷ ಬಲಿ ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ.ಬೆಳಗ್ಗೆ ಗಂಟೆಯಿಂದ 6 ಗಂಟೆ ತನಕ, 8.15ರಿಂದ 9.30 ತನಕ, 9.45 ರಿಂದ 11.45ರ ತನಕ ಹಾಗೂ ಸಂಜೆ 5 ಗಂಟೆಯಿಂದ 6.30 ತನಕ ಸೇವೆ ನಡೆಯಲಿದೆ. ಪ್ರತಿ ಸರದಿಯಲ್ಲಿ 60 ಭಕ್ತರಂತೆ 4ಸರದಿಯಲ್ಲಿ 240 ಭಕ್ತರು ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ.ಪ್ರತಿ ಸೇವೆಗೆ 2 ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಪ್ರತ್ಯೇಕವಾಗಿ ನಾಗಪ್ರತಿಷ್ಠೆ ಸೇವೆ ನೆರವೇರಿಸುವ ಭಕ್ತರಿಗೆ ದಿನ ಒಂದಕ್ಕೆ 25 ಸೇವಾ ರಶೀದಿಗೆ ಅವಕಾಶ ನೀಡಲಾಗಿದೆ. ಹಾಗೂ.ಪ್ರತಿ ದಿನ 3 ಭಕ್ತರಿಗೆ ಪಂಚಾಮೃತ ಮಹಾಭಿಷೇಕ ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರಕಾರದ ಕೋವಿಡ್ ನಿಯಮಗಳಿಗೆ ಅನುಗುಣವಾಗಿ ಭಕ್ತರಿಗೆ ಸೇವೆಗಳನ್ನು ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading