Ad Widget

ಮೂರನೇ ಅಲೆ ಭೀತಿ : ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ- ನೈಟ್ ಕರ್ಫ್ಯೂ ಜಾರಿ

ರಾಜ್ಯದ ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಸೇರಿದಂತೆ ಹೊಸ ಮಾರ್ಗಸೂಚಿಗಳನ್ನು ರಾಜ್ಯಸರಕಾರ ಹೊರಡಿಸಿದೆ.
ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

. . . . . . . . .

ನೈಟ್ ಕರ್ಫ್ಯೂ : ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಂತಿರುವ ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳು ಮತ್ತು ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ.
ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ ಮದುವೆ, ಕುಟುಂಬದ ಕಾರ್ಯಕ್ರಮಗಳಿಗೆ 100 ಜನರ ಮಿತಿ ಹೇರಲಾಗಿದೆ. ಈ ಸಂದರ್ಭ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ. ಅಂತ್ಯ ಸಂಸ್ಕಾರಕ್ಕೆ ಗರಿಷ್ಠ 20 ಮಂದಿ ಸೇರಲು ಅನುಮತಿಸಲಾಗಿದೆ.

. . . . . . .

ಪ್ರಾರ್ಥನಾ ಮಂದಿರ, ಮಸೀದಿ, ಚರ್ಚ್, ದೇವಸ್ಥಾನ, ಗುರುದ್ವಾರ ಮತ್ತು ಇತರ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಆದರೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಆದಾಗ್ಯೂ, ಜಾತ್ರೆ, ದೇವಸ್ಥಾನದ ಮಹೋತ್ಸವ, ಮೆರವಣಿಗೆ ಮತ್ತಿತರ ಸಮಾವೇಶಗಳಿಗೆ ಅವಕಾಶವಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೇಂದ್ರ, ರಾಜ್ಯ ಸರ್ಕಾರಗಳ ಎಲ್ಲಾ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು, ಅಗತ್ಯ ಸೇವೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಬಹುದು. ಅವರ ಕಚೇರಿಯ ಅಧಿಕೃತ ಗುರುತಿನ ಚೀಟಿಯೊಂದಿಗೆ ಅವರು ಓಡಾಡಬಹುದು. ರೋಗಿಗಳು ಮತ್ತು ಅವರ ಸಂಬಂಧಿಕರು ನಿರ್ದಿಷ್ಟ ದಾಖಲೆಯೊಂದಿಗೆ ಆಸ್ಪತ್ರೆಗಳಿಗೆ ಹೋಗಬಹುದು, ಲಸಿಕೆ ಹಾಕಲು ಸಾರ್ವಜನಿಕರು ದಾಖಲೆಯೊಂದಿಗೆ ಲಸಿಕಾ ಕೇಂದ್ರಗಳಿಗೆ ಹೋಗಬಹುದು.

ಅಗತ್ಯ ವಸ್ತುಗಳು, ದಿನಸಿ ಅಂಗಡಿ, ಹಣ್ಣು ಹಂಪಲು, ತರಕಾರಿ, ಮಾಂಸ, ಮೀನು, ಡೈರಿ, ಹಾಲಿನ ಬೂತ್ , ಪಶು ಆಹಾರದ ಅಂಗಡಿಗಳು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ತೆರೆಯಬಹುದು. ಬೀದಿ ಬದಿ ವ್ಯಾಪಾರಿಗಳು, ಪಡಿತರ ಅಂಗಡಿಗಳು, ಮದ್ಯದ ಅಂಗಡಿಗಳು ಕೂಡ ಮಧ್ಯಾಹ್ನ 2ರವರೆಗೆ ಕಾರ್ಯಾಚರಿಸಬಹುದು. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಪಾರ್ಸೆಲ್ ಸೇವೆ ಮಾತ್ರ ಒದಗಿಸಬಹುದು. ರೈಲು ಮತ್ತು ವಿಮಾನ ಸೇವೆ ಅನುಮತಿಸಲಾಗಿದೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಗೆ ಖಾಸಗಿ ವಾಹನಗಳು ಅಗತ್ಯ ದಾಖಲೆಗಳೊಂದಿಗೆ ಮಾತ್ರ ಸಂಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯುಕ್ತರು, ಜಿಲ್ಲೆಗಳಲ್ಲಿ ಡಿಸಿಗಳು ತಮ್ಮ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಜಾರಿಗೊಳಿಸಬೇಕು ಎಂದು ತಿಳಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading