ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ

. . . . . . . . .

ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರಸಾದ್ ಟೆಕ್ಸ್ ಟೈಲ್ಸ್ ನ ಸುವರ್ಣ ಮಹೋತ್ಸವದ ಅಂಗವಾಗಿ
ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇವರ ಸಹಯೋಗದೊಂದಿಗೆ ಜು- 28ರಿಂದ ಆ. 12ರ ವರೆಗೆ ಶೋರೂಂನ ಭಾಗದಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ ಹಾಗೂ ಭಾರೀ ದರ ಕಡಿತ ಮಾರಾಟ ನಡೆಯಲಿದೆ. ಇದರ ಉದ್ಘಾಟನೆಯನ್ನು ಜು. 28ರಂದು ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ. ರಾಮಚಂದ್ರ ಭಟ್ ದೇವಸ್ಯ ನೆರವೇರಿಸಿ ಶುಭ ಹಾರೈಸಿದರು.

. . . . . . .

ಬೆಳ್ಳಾರೆ ಪೋಲಿಸ್ ಠಾಣಾ ಠಾಣಾಧಿಕಾರಿ ಆಂಜನೇಯ ರೆಡ್ಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ‌. ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ,
ಬೆಳ್ಳಾರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಮಾಧವ ಗೌಡ ಕಾಮಧೇನು, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಬಾಳಿಲ ಗ್ರಾ.ಪಂ. ಸದಸ್ಯೆ ಶ್ರೀಮತಿ ಸರಸ್ವತಿ ಕಾಮತ್, ಪ್ರಸಾದ್ ಟೆಕ್ಸ್ ಟೈಲ್ಸ್ ನ ಮಾಲಕರಾದ ನರಸಿಂಹ ಜೋಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್ ಹಾರ್ಡ್ ವೇರ್ಸ್ ನ ಮಾಲಕ ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕ ವಸಂತ ಎಲ್ ವಂದಿಸಿದರು. ಈ ಮೇಳದಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಸಿದ್ಧ ಉಡುಪುಗಳು ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading