ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ

. . . . . . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ ಹಾಗೂ 15 ಹೊಸ ಸಂಘಗಳ ಉದ್ಘಾಟನಾ ಸಮಾರಂಭವನ್ನು ಸುಳ್ಯ ಮಹಿಳಾ ಮಂಡಲದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಸುತ್ತಿರುವುದು ಶ್ಲಾಘನೀಯ ಗ್ರಾಮಗಳ ರಚಿಸಿಕೊಂಡು ಎಲ್ಲಾ ಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಮಚಂದ್ರ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ಕಳಂಜ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸುಳ್ಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವರವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳ ಬಗ್ಗೆ ಸಿಎಸ್ಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಸುಳ್ಯ ವಲಯದ ಅಧ್ಯಕ್ಷ ಸುಂದರ ದೊಡ್ಡೇರಿ ಉಪಸ್ಥಿತರಿದ್ದರು. ಸುರೇಶ ಸೇವಾ ಪ್ರತಿನಿಧಿ ಸ್ವಾಗತಿಸಿ, ಸೇವಾ ಪ್ರತಿನಿಧಿ ಗೀತಾ ವಂದಿಸಿದರು. ವಲಯದ ಮೇಲ್ವಿಚಾರಕಿ ಶ್ರೀಮತಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading