ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ
ರಕ್ತದಾನ ಶಿಬಿರವು 15- 8– 2021ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇಲ್ಲಿಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ನ ಅಧ್ಯಕ್ಷ ಡಾ. ಕೆ. ವಿ ಚಿದಾನಂದರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎ ಒ ಎಲ್ ಇಯ ಖಜಾಂಚಿ ಶ್ರೀಮತಿ ಶೋಭಾ ಚಿದಾನಂದ, ನಿರ್ದೇಶಕ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಂಬಿಕೈ ನಟರಾಜನ್, ವಿಶ್ರಾಂತ ಪ್ರಾಧ್ಯಾಪಕಿ ಡಾ. ಶೀಲಾ ಜಿ ನಾಯಕ್,ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತ ದೇವರು, ಬ್ಲಡ್ ಬ್ಯಾಂಕ್ ಇನ್ಚಾರ್ಜ್ ಆಫೀಸರ್ ಗಳಾದಡಾ. ಗೋಪಿನಾಥ ರಾಜೇಶ್ ಹಾಗೂ ಡಾ. ನವ್ಯಾ ಬಿ ಎನ್, ನೆಹರೂ ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಬಾಲಚಂದ್ರ ಗೌಡ ಕೆ, ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆ ದಿನ ಕಾಲೇಜಿನ ರೆಡ್ ಕ್ರಾಸ್ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ರಕ್ತದಾನ ಮಾಡುವುದರೊಂದಿಗೆ, ರೆಡ್ ಕ್ರಾಸ್ ವತಿಯಿಂದ ಅಗತ್ಯ ಬಿದ್ದಾಗ ರಕ್ತದಾನ ಮಾಡಲು 130ಕ್ಕೂ ಅಧಿಕ ರಕ್ತದಾನಿಗಳ ಪಟ್ಟಿಯನ್ನು, ಎ ಒ ಎಲ್ ಇ ಯ ಅಧ್ಯಕ್ಷರಿಗೆ ಹಸ್ತಾಂತರಿಸಲಾಗುವುದು ಎಂದು ಎನ್ ಎಂ ಸಿ ಯ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- Saturday
- November 23rd, 2024