ಕೋವಿಡ್ ಕಾರಣದಿಂದ ಶಾಲೆಗಳು ಪುನರಾರಂಭವಾಗದೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಹೀಗಿದ್ದರೂ ಸರ್ಕಾರವು ಆನ್ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಗ್ರಾಮೀಣ ಭಾಗದಲ್ಲಿ ಅಂತರ್ಜಾಲದ ಸಮಸ್ಯೆಯಿರುವುದರಿಂದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ತೊಡಕುಂಟಾಗಿರುತ್ತದೆ. ಇಂತಹ ವಿಷಮ ಪರಿಸ್ಥಿತಿಯನ್ನು ಮನಗಂಡು ಇದೀಗ ಕಳಂಜ ಗ್ರಾಮ ಪಂಚಾಯತ್ ನಿಂದ ವಿದ್ಯಾರ್ಥಿಗಳಿಗೆ ಉಚಿತ ವೈಫೈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಳಂಜ ಗ್ರಾಮ ಪಂಚಾಯತ್ ನ ಗೌರಿ ಸಭಾಂಗಣದಲ್ಲಿ ವಿಶಾಲವಾದ ಸ್ಥಳವಕಾಶವಿದ್ದು ಇಲ್ಲಿಗೆ ಬಂದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬಹುದು. ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಮೇಜು ಹಾಗೂ ಕುರ್ಚಿಗಳ ವ್ಯವಸ್ಥೆಯಿದ್ದು ಸಾಮಾಜಿಕ ಅಂತರವನ್ನು ಪಾಲಿಸಿಕೊಂಡು ತಮ್ಮ ಮೊಬೈಲ್ ಅಥವಾ ಲ್ಯಾಪ್ಟಾಪ್ ನಲ್ಲಿ ಆನ್ಲೈನ್ ತರಗತಿಗಳನ್ನು ಕೇಳಬಹುದು. ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಈ ಮೂಲಕ ವಿನಂತಿಸಲಾಗಿದೆ.
- Saturday
- November 23rd, 2024