ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸುಳ್ಯ, ತಾಲ್ಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ, ತಾಲ್ಲೂಕಿನಲ್ಲಿ ಹೊಸದಾಗಿ ರಚನೆ ಯಾದ 12 ಪ.ಪಂಗಡ ಸ್ತ್ರೀ ಶಕ್ತಿ ಗುಂಪುಗಳಿಗೆ ಸುಳ್ಯ ತಾಲ್ಲೂಕು ಸ್ತ್ರೀ ಶಕ್ತಿ ಭವನದಲ್ಲಿ ನಡೆದ 3 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪಂಚಾಯತ್ ರಾಜ್ ಇಲಾಖೆಯಲ್ಲಿ ಸಹಾ ಸ್ತ್ರೀ ಶಕ್ತಿ ಗುಂಪಿನ ಮಹಿಳೆಯರಿಗೆ ಆರ್ಥಿಕ ಚಟುವಟಿಕೆಗಳನ್ನು ಮಾಡಲು ಕೆಲವೊಂದು ಯೋಜನೆ ಗಳು ಇದ್ದು ಅದರ ಸದುಪಯೋಗ ಮಾಡಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸೂಚಿಸಿದರು. ತಾಲ್ಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಶ್ರೀಮತಿ ರಶ್ಮಿ ರಜನಿಕಾಂತ್ ರವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ಪ್ರಾಸ್ತಾವಿಕ ಮಾತುಗಳನ್ನಾಡಿ 3 ದಿನಗಳ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳು ತರಭೇತಿ ಯ ಸದುಪಯೋಗ ಪಡೆದು ಕೊಳ್ಳಲು ಕರೆ ನೀಡಿದರು. ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ಗಿರಿಜಾ ರವರು ಹಾಜರಿದ್ದು ಗುಂಪಿನ ಮಹಿಳೆಯರಿಗೆ ದಾಖಲಾತಿ ಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು. ಮೇಲ್ವಿಚಾರಕಿ ಯರಾದ ವಿಜಯ ಕಾರ್ಯಕ್ರಮ ನಿರೂಪಿಸಿ ಶೈಲಜಾ ಸ್ವಾಗತಿಸಿ, ದೀಪಿಕಾ ವಂದಿಸಿ ದರು. ಮೇಲ್ವಿಚಾರಕಿಯರಾದ ರವಿಶ್ರೀ, ಉಷಾ, ಮತ್ತು ಕಛೇರಿಯ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.
ತರಬೇತಿಯಲ್ಲಿ ಶಿಬಿರಾರ್ಥಿಗಳಿಗೆ ಜೇನುಕೃಷಿ ಬಗ್ಗೆ ಕೀರ್ತನ್ ಶೇಣಿ,
ಸಣ್ಣ ಉದ್ದಿಮೆಗಳಿಗೆ ನೀಡುವ ಸಾಲ ಸೌಲಭ್ಯಗಳ ಬಗ್ಗೆ ನಿವೃತ್ತ ಕೈಗಾರಿಕಾ ವಿಸ್ತರಣಾಧಿಕಾರಿ ಶೀ ವೀರಪ್ಪ ಗೌಡ, ಕೈತೋಟ ನಿರ್ವಹಣೆ ಬಗ್ಗೆ ತೋಟಗಾರಿಕೆ ಅಧೀಕ್ಷಕರಾದ ಶ್ರೀಮತಿ ಸುಹಾನ, ಮಾರುಕಟ್ಟೆ ಕೌಶಲ್ಯ ಎಂಬ ವಿಷಯದ ಬಗ್ಗೆ, ಉಜಿರೆ ರುಡ್ಸೆಟ್ ಸಂಸ್ಥೆಯ ಪ್ರತಿನಿಧಿ ಅನಿಲ್ ರೈ ಬೆಳ್ಳಾರೆ , ಹಾಗೂ ಕಂಪ್ಯೂಟರ್ ತಂತ್ರಜ್ಞಾನದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿ ಕೊಟ್ಟರು.
- Thursday
- November 21st, 2024