ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಬಾಳಿಲ ಗ್ರಾ.ಪಂ. ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗ್ರಾ.ಪಂ. ವತಿಯಿಂದ ಸನ್ಮಾನ ಕಾರ್ಯಕ್ರಮ ಆ. 26 ರಂದು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ಕು. ಪದ್ಮಿನಿ ಸಿ.ಆರ್, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 611 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದ ಕೃತಿಕಾ ಪಂಜಿಗಾರು, 604 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದ ಕಿರಣ್ ಪಿ ಮತ್ತು 6೦೦ ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದ ಭಾವನ ಬಿ.ವಿ. ಯವರನ್ನು ಸಭಾಧ್ಯಕ್ಷತೆ ವಹಿಸಿದ್ದ ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಚಾಕೊಟೆಡ್ಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಪುರೋಹಿತ್ ಬಾಳಿಲ ವೇದಿಕೆಯಲ್ಲಿದ್ದು ಶುಭ ಹಾರೈಸಿದರು. ರಾಜೇಶ್ ಅಯ್ಯನಕಟ್ಟೆ ಅಭಿನಂದನಾ ಮಾತುಗಳನ್ನಾಡಿದರು. ಗ್ರಾ.ಪಂ. ಸದಸ್ಯ ರಮೇಶ್ ರೈ ಅಗಲ್ಪಾಡಿ, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶೋಧರ ನಾರಾಲು ಆಶಯದ ಮಾತುಗಳನ್ನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೂವಪ್ಪ ಶುಭ ಹಾರೈಸಿ ವಂದಿಸಿದರು. ಗ್ರಾ.ಪಂ. ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಸದಸ್ಯ ಹರ್ಷ ಜೋಗಿಬೆಟ್ಟು, ಕಾರ್ಯದರ್ಶಿ ಜಯಶೀಲ ರೈ, ಸಿಬ್ಬಂದಿಗಳಾದ ಸುಂದರ ಮತ್ತು ಬಾಬು ಅಭಿನಂದನಾ ಪತ್ರ ವಾಚಿಸಿದರು. ಗ್ರಾ.ಪಂ. ಸದಸ್ಯರು, ಮಾಜಿ ಸದಸ್ಯರು, ಮಾಜಿ ತಾ.ಪಂ. ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ಊರವರು ಇದ್ದರು.
- Thursday
- November 21st, 2024