ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಬೆಳ್ಳಾರೆ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ ಅನಿಲ ದರ ಏರಿಕೆ ಮಾಡಿದ್ದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಅಡುಗೆ ಅನಿಲ ಮಾತ್ರವಲ್ಲದೆ ಮೋದಿ ಸರಕಾರ ಕಳೆದ ಏಳು ವರ್ಷದಿಂದ ನಿರಂತರವಾಗಿ ಜನರ ಜೀವನಕ್ಕೆ ಆವಶ್ಯಕತೆ ಇರುವ ಎಲ್ಲಾ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಸಿದ್ದೀಕ್ ಎಂ, ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್.ಬಿಎ, ಆಶಿರ್ ಎಬಿ, ಫೈಝಲ್ ಟಿಎ, ಗ್ರಾಮ ಸಮಿತಿ ಉಪಾಧ್ಯಕ್ಷ ರಶೀದ್ ಎಂ.ಆರ್, ಕಾರ್ಯದರ್ಶಿ ಜಾಬಿರ್ ಸಿ.ಎಂ,ಜೊತೆ ಕಾರ್ಯದರ್ಶಿ ಶಫೀಂ.ಕೆ ಹಾಗೂ ಗ್ರಾಮ ಸಮಿತಿ ಸದಸ್ಯರು ಸೇರಿದಂತೆ ಹಲವಾರು ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.