ದರ್ಖಾಸ್ತು ಸ.ಹಿ.ಪ್ರಾ.ಶಾಲೆಗೆ ಕರ್ನಾಟಕ ಸರ್ಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹರೀಶ್.ಡಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಲ್ಲವಿ ಹಾಗೂ ಶಿಕ್ಷಕ ವೃಂದದವರು, ಗಣ್ಯರು ಉಪಸ್ಥಿತರಿದ್ದರು