ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ರೆಡ್ ಕ್ರಾಸ್ ಸಂಸ್ಥೆ, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರವನ್ನು ದಿನಾಂಕ 08-09-21ನೇ ಬುಧವಾರದಂದು ಹಮ್ಮಿಕೊಳ್ಳಲಾಗಿದೆ.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,
ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಚಯರ್ಮನ್ ಸಿ ಎ ಶಾಂತರಾಮ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ತಹಶೀಲ್ದಾರರಾದ ಕು. ಅನಿತಾಲಕ್ಷ್ಮಿ, ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹಾದೇವ ಎಸ್ ಪಿ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ನಂದಕುಮಾರ್ ಬಿ, ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಕೆ ಎಂ, ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಪ್ರಥಮ ಚಿಕಿತ್ಸಾ ತರಬೇತುದಾರರಾದ ಸಚೇತ್ ಸುವರ್ಣ ಮತ್ತು ಅವರ ತಂಡ ತರಬೇತಿಯನ್ನು ನಡೆಸಿಕೊಡಲಿದ್ದಾರೆ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ, ಕಾರ್ಯಕ್ರಮದ ಸಂಘಟಕಿ ಡಾ. ಅನುರಾಧಾ ಕುರುಂಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Monday
- April 7th, 2025