Ad Widget

ಸೆ.13 : ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಹೊಸ್ತಾರೋಗಣೆ ಕಾರ್ಯಕ್ರಮ – ಬೆಳಗ್ಗೆ 9.15ರ ನಂತರ ದೇವರ ದರ್ಶನ

ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪೂರ್ವ ಸಂಪ್ರದಾಯದಂತೆ ಸೆ.13ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ಕಾರ್ಯಕ್ರಮ ನಡೆಯಲಿದ್ದು ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಕದಿರು ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರಾತಃಕಾಲ 5.15ಕ್ಕೆ ಸರಿಯಾಗಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಪೂರ್ವಾಹ್ನ ಗಂಟೆ 7.30ಕ್ಕೆ ತೆನೆ ತರುವುದು, ಕದಿರು ಪೂಜೆ ನಡೆಯಲಿದೆ. ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ. ಭಕ್ತಾದಿಗಳಿಗೆ ಬೆಳಗ್ಗೆ 9.15ರ ನಂತರ ದೇವರ ದರ್ಶನ ಇರಲಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!