ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಸೆ.21 ರಂದು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಯಿತು.
ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಶ್ರೀಮತಿ ಬಿಂದು.ಪಿ, ಶ್ರೀಮತಿ ಶಿಲ್ಪಾ ಕೊತ್ನಡ್ಕ ಉಪಸ್ಥಿತರಿದ್ದರು.
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಸ್ವಾಗತಿಸಿ, ವಂದಿಸಿದರು. ಗ್ರಾಮಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.
(ವರದಿ :- ಉಲ್ಲಾಸ್ ಕಜ್ಜೋಡಿ)