ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಸುಳ್ಯ ಸಂಯೋಗದಲ್ಲಿ ಅಮೃತ ಗೊಂಚಲು ಸಮಿತಿ ಹರಿಹರ ಪಲ್ಲತ್ತಡ್ಕ ವತಿಯಿಂದ ಸೆ.21 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಹರ್ಷಿಣಿಯವರು ವಹಿಸಿದರು. ಶ್ರೀಮತಿ ತಾರಾ ಮಲ್ಲಾರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ನಿರ್ದೇಶಕರು ಲೋಕನಾಥ್, ಬ್ಲಾಕ್ ಸೊಸೈಟಿ ಅಧ್ಯಕ್ಷೆ ರಶ್ಮಿ ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ ಪೌಷ್ಟಿಕ ಆಹಾರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಭಾಗ್ಯ ಆರೋಗ್ಯದ ಬಗ್ಗೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಕಿರಿಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಶ್ರೀಮತಿ ಮೋಹಿನಿ, ಸುಪ್ರೀತಾ, ಹಿರಿಯ ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್ ಹಾಗೂ ಸ್ತ್ರೀ ಶಕ್ತಿ ಗುಂಪಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹರಿಣಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ತೀರ್ಥಕುಮಾರಿ ಕಾರ್ಯಕ್ರಮ ನಿರೂಪಿಸಿದರು. ನಿರ್ಮಲಾ ವಂದಿಸಿದರು.
(ವರದಿ :- ಉಲ್ಲಾಸ್ ಕಜ್ಜೋಡಿ)