Ad Widget

ಕೊಲ್ಲಮೊಗ್ರು :- ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ನಡಿಗೆ ಜಾಥಾ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B.C ಟ್ರಸ್ಟ್.(ರಿ.) ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರು ಗ್ರಾಮದಲ್ಲಿ ಅ.02 ರಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿ, ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕ, ಕಿರಿಯ ಪ್ರಾಥಮಿಕ ಶಾಲೆ ಗಡಿಕಲ್ಲು ಇವುಗಳ ಸಂಯುಕ್ತಾಶ್ರಯದಲ್ಲಿ ಗಾಂಧಿ ನಡಿಗೆ ಜಾಥಾ ಕಾರ್ಯಕ್ರಮ ನಡೆಯಿತು. ಕೊಲ್ಲಮೊಗ್ರು ಮುಖ್ಯ ರಸ್ತೆಯಿಂದ ಗಾಂಧಿ ನಡಿಗೆ ಮೂಲಕ ಗಡಿಕಲ್ಲು ಶಾಲೆಯಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.
ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಹಾಗೂ ಬ್ಯಾಂಡ್ ಬಾರಿಸುವ ಮೂಲಕ ಜಾಥಾಕ್ಕೆ ನಿವೃತ್ತ ಮುಖ್ಯ ಗುರುಗಳಾದ ಶಿವರಾಮ ಅವರು ಚಾಲನೆ ನೀಡಿ ಗಾಂಧೀಜಿ ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಕೆ ಮಾಡಿಕೊಂಡಲ್ಲಿ ಸಮಾಜದಲ್ಲಿ ಸುಧಾರಣೆ ಆಗಬಹುದು ಎಂದರು. ಕಾರ್ಯಕ್ರಮದಲ್ಲಿ ಸುಳ್ಯ ಜನಜಾಗೃತಿ ವೇದಿಕೆಯ ಸದಸ್ಯರಾದ ಮಣಿಕಂಠ ಕೊಳಗೆ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್ ಹಾಗೂ ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ, ಅಶ್ವಥ್ ಯಳದಾಳು, ಮೋಹಿನಿ ಕಟ್ಟ, ಶಿವಮ್ಮ ಕಟ್ಟ ಹಾಗೂ ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ ಎಸ್.ಡಿ.ಎಂ.ಸಿ ಅದ್ಯಕ್ಷರಾದ ಬಾಲಸುಬ್ರಹ್ಮಣ್ಯ ಭಟ್, ಮಾಜಿ ಗ್ರಾಮಪಂಚಾಯತ್ ಸದಸ್ಯರಾದ ಶೇಖರ್ ಅಂಬೆಕಲ್ಲು, ಸ.ಹಿ.ಪ್ರಾ.ಶಾಲೆ ಗಡಿಕಲ್ಲು ಎಸ್.ಡಿ.ಎಂ.ಸಿ ಅದ್ಯಕ್ಷರಾದ ಯೋಗೀಶ್ ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಲಕ್ಷ್ಮಣ ಐನೆಕಿದು, ಹರ್ಷ ಅಡ್ನೂರು ಮಜಲು, ಬಾಲಸುಬ್ರಹ್ಮಣ್ಯ, ಶ್ರೀನಿವಾಸ್ ಕಟ್ಟ, ಯಶವಂತ ಕಾಜಿಮಡ್ಕ ಹಾಗೂ ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು ಇದರ ಮುಖ್ಯ ಶಿಕ್ಷಕರಾದ ಪಿ.ಕೆ ಸುರೇಶ್ ಹಾಗೂ ಕೊಲ್ಲಮೊಗ್ರು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ದೋಣಿಪಳ್ಳ, ಯಶೋಧ ಅಂಬೆಕಲ್ಲು ಹಾಗೂ ಸೇವಾಪ್ರತಿನಿಧಿ ಸಾವಿತ್ರಿ ಚಿನ್ನಪ್ಪ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸೇವಾಪ್ರತಿನಿಧಿ ಶೋಭಾ, ಸ್ವ-ಸಹಾಯ ಸಂಘದ ಸದಸ್ಯರುಗಳು, ಶಾಲಾ ವಿದ್ಯಾರ್ಥಿಗಳು, ಅನುದಾನಿತ ಪ್ರೌಢಶಾಲಾ ಶಿಕ್ಷಕರು ಹಾಗೂ ಮೋನಪ್ಪ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು. ಮಣಿಕಂಠ ಕಟ್ಟ ಸ್ವಾಗತಿಸಿ, ಮಾಧವ ಚಾಂತಾಳ ವಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾರ್ಯಕ್ರಮ ನಿರೂಪಿಸಿದರು.

. . . . . . . . .

(ವರದಿ :- ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading