Ad Widget

ಅಡ್ತಲೆ : ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜನ್ಮದಿನಾಚರಣೆ

ಅಡ್ತಲೆ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಸ್ಪಂದನ ಗೆಳೆಯರ ಬಳಗ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಡೆಯಿತು. ನಿವೃತ್ತ ಯೋಧ ಕಮಲಾಕ್ಷ ಪಿಂಡಿಮನೆಯವರು ಗಾಂಧಿ ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ. ಅಧ್ಯಕ್ಷ ಗೋಪಾಲಕೃಷ್ಣ ಪಿಂಡಿಮನೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಜಯಾ ಲೋಹಿತ್ ಮೇಲಡ್ತಲೆ ದೀಪ ಬೆಳಗಿಸಿ, ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಕುಮಾರಿ ಶ್ವೇತ ಅರಮನೆಗಯ, ನಿವೃತ್ತ ಯೋಧ ಕಮಲಾಕ್ಷ ಪಿಂಡಿಮನೆ, ಮುಖ್ಯೋಪಾಧ್ಯಾಯ ಮಾಧವ ಪೂಜಾರಿಮನೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ ಅಡ್ತಲೆ,ಭವಾನಿ ಶಂಕರ ಅಡ್ತಲೆ, ಗ್ರಾಮ ಪಂಚಾಯತ್ ಸದಸ್ಯ ಕೇಶವ ಅಡ್ತಲೆ, ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷ ವಿನಯ್ ಬೆದ್ರುಪಣೆ, ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳ ಸದಸ್ಯರು, ಎಸ್. ಡಿ. ಎಂ. ಸಿ. ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಸ್ಪಂದನ ಗೆಳೆಯರ ಬಳಗ ಮತ್ತು ನಾಗರಿಕ ಹಿತರಕ್ಷಣಾ ವೇದಿಕೆ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವಿನಯ್ ಬೆದ್ರುಪಣೆ ಸ್ವಾಗತಿಸಿ, ಹರಿಪ್ರಸಾದ್. ಎ. ಕೆ. ವಂದಿಸಿದರು. ರಂಜಿತ್ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading