ಭಾರತೀಯ ಜನತಾ ಪಾರ್ಟಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅ.06ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.
ಸುಬ್ರಹ್ಮಣ್ಯದ ವಿವಿಐಪಿ ಗೆಸ್ಟ್ ಹೌಸ್ ನಲ್ಲಿ ಕಾರ್ಯಕರ್ತರು, ಪಕ್ಷದ ಪ್ರಮುಖರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿದರು. ಬಳಿಕ ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಬಳಿಕ ಸುಬ್ರಹ್ಮಣ್ಯದಲ್ಲಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಲಿತಾ ಗುಂಡಡ್ಕ, ಉಪಾಧ್ಯಕ್ಷೆ ಸವಿತಾ, ಪ್ರಮುಖರಾದ ಹರೀಶ್ ಕಂಜಿಪಿಲಿ, ಮಾಧವ ಚಾಂತಾಳ, ದಿನೇಶ್ ಸಂಪ್ಯಾಡಿ, ರಾಜೇಶ್ ಎನ್.ಎಸ್, ಶ್ರೀವತ್ಸಾ, ಶೋಭಾ ಗಿರಿಧರ್, ವನಜಾ ಭಟ್, ಪ್ರಸನ್ನ ದರ್ಬೆ, ಶ್ರೀಕುಮಾರ್ ಬಿಲದ್ವಾರ, ಸೇರಿದಂತೆ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
(ವರದಿ :- ಉಲ್ಲಾಸ್ ಕಜ್ಜೋಡಿ)