Ad Widget

ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ

. . . . . . .

ಯಕ್ಷರಂಗದ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ರವರು ಅ.12ರಂದು ಬೆಳಗ್ಗೆ ವಿಧಿವಶರಾಗಿದ್ದು, ಅವರಿಗೆ 66 ವರ್ಷ ವಯಸ್ಸಾಗಿತ್ತು.
ಇವರು 1955 ರಲ್ಲಿ ಪದ್ಯಾಣ ತಿರುಮಲೇಶ್ವರ ಭಟ್ ಹಾಗೂ ಸಾವಿತ್ರಿ ದಂಪತಿಗಳ ಮೂರನೇ ಮಗನಾಗಿ ಜನಿಸಿದ್ದು, ಕಳೆದ 40 ವರ್ಷಗಳಿಂದ ತೆಂಕುತಿಟ್ಟಿನ ಯಕ್ಷಗಾನ ಭಾಗವತಿಕೆ ಕ್ಷೇತ್ರದಲ್ಲಿ ಅಗ್ರಗಣ್ಯ ಕಲಾವಿದರಾಗಿ ಪ್ರಸಿದ್ದರಾಗಿದ್ದಾರೆ.
ಪದ್ಯಾಣ ಗಣಪತಿ ಭಟ್ ಅವರು ಚೌಡೇಶ್ವರಿ, ಕುಡಾವು, ಸುರತ್ಕಲ್, ಎಡನೀರು, ಮಂಗಳಾದೇವಿ, ಕರ್ನಾಟಕ, ಹೊಸನಗರ ಮುಂತಾದ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಕಲಾಸೇವೆ ಮಾಡಿದ್ದು, ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.
ದುಬೈ ಸೇರಿದಂತೆ ವಿದೇಶಗಳಲ್ಲಿಯೂ ತಮ್ಮ ಕಲಾಪ್ರದರ್ಶನವನ್ನು ನೀಡಿ ಸನ್ಮಾನಿತರಾಗಿದ್ದಾರೆ. ಹಾಗೂ ಇವರು ಇ-ಟಿವಿಯ ಎದೆತುಂಬಿ ಹಾಡುವೆನು ಎಂಬ ಸಂಗೀತ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ ಮೊದಲ ಯಕ್ಷಗಾನ ಭಾಗವತರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

(ವರದಿ :- ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!