ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಶಿಕ್ಷಕರ ಸಂಘದ ವತಿಯಿಂದ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಸ್ವಚ್ಛತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಕರಪತ್ರ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸುಳ್ಯದ ಕೆ ಎಫ್ ಡಿ ಸಿ ಗಾರ್ಡನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಾಯಿಗೀತಾ ಜ್ಞಾನೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ “ಮನುಷ್ಯ ಆಂತರಿಕವಾಗಿ ಸ್ವಚ್ಛತೆಯಾದಾಗ ಬಾಹ್ಯ ಸ್ವಚ್ಛತೆ ತನ್ನಿಂದ ತಾನೇ ಸಾಧ್ಯ. ಸ್ವಚ್ಛತೆ ಪ್ರತಿಯೊಬ್ಬ ವ್ಯಕ್ತಿಯ ಮನಸ್ಸಿನಿಂದ ಆರಂಭವಾಗಬೇಕು. ಆಗ ಸ್ವಸ್ಥ ಮತ್ತು ಸ್ವಚ್ಛ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ಕಾರ್ಯಕ್ರಮಕ್ಜೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಶ್ರೀಮತಿ ರತ್ನಾವತಿ ಡಿ ಸ್ವಾಗತಿಸಿ, ಶಿಕ್ಷಕ ಸಂಘದ ಸಂಚಾಲಕ ತಿಪ್ಪೇಸ್ವಾಮಿ ಡಿ ಹೆಚ್ ವಂದಿಸಿದರು. ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕರಪತ್ರವನ್ನು ಅನಾವರಣಗೊಳಿಸಿ ಕೆವಿಜಿ ಕ್ಯಾಂಪಸ್ ನ ಸುತ್ತಮುತ್ತಲಿನ ಅಂಗಡಿಗಳು, ಹೋಟೆಲ್ ಗಳು, ಅಟೋ ನಿಲ್ದಾಣಗಳಲ್ಲಿ ಹಂಚಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
- Saturday
- November 23rd, 2024