ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮವನ್ನು ದಿನಾಂಕ ಆ.28ರಿಂದ ಆ.30ರವರೆಗೆ ಹಮ್ಮಿಕೊಂಡಿದ್ದು, ಅದರ ಉದ್ಘಾಟನಾ ಸಮಾರಂಭವು ದಿನಾಂಕ ಆ.28 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ತಹಶೀಲ್ದಾರರಾದ ಕುಮಾರಿ ಅನಿತಾಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,
ಕರ್ನಾಟಕದಲ್ಲಿ ಕನ್ನಡ ವ್ಯವಹಾರ ಭಾಷೆ ಆಗುವುದರ ಜೊತೆಗೆ ಪ್ರತಿಯೊಬ್ಬ ಕನ್ನಡಿಗರು ಮನಸಾರೆ ಕನ್ನಡ ಭಾಷೆಯಲ್ಲಿ ಮಾತನಾಡಬೇಕು. ಕನ್ನಡವನ್ನು
ಬಳಸಿ, ಉಳಿಸಿ ಬೆಳೆಸೋಣ,
ಇತರ ಭಾಷೆಯನ್ನು ಪ್ರೀತಿಸೋಣ, ಗೌರವಿಸೋಣ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯದ ಸ್ತ್ರೀರೋಗತಜ್ಞೆ ಡಾ. ವೀಣಾ ಎನ್ ಮಾತನಾಡಿ ಕನ್ನಡ ಭಾಷೆಗೆ ಕನ್ನಡ ಸಾಹಿತಿಗಳ ಕೊಡುಗೆ ಅಪಾರವಾದದ್ದು. ಅದನ್ನು ಓದುವ ಮೂಲಕ ಉಳಿಸಿ ಬೆಳೆಸುವುದು ಕನ್ನಡಿಗರಾದ ನಮ್ಮ ಕರ್ತವ್ಯ. ನಮ್ಮ ಮಾತೃ ಭಾಷೆಯಾದ ಕನ್ನಡವನ್ನು ಸ್ವಪ್ರತಿಷ್ಠೆ ಬಿಟ್ಟು ಮಾತನಾಡೋಣ ಎಂದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕಿ ರತ್ನಾವತಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಕೃಪಾ ಎ ಎನ್ ವಂದಿಸಿದರು. ಕಾರ್ಯಕ್ರಮ ಸಂಘಟಕಿ ಕನ್ನಡ ಸಂಘದ ಸಂಚಾಲಕಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಕನ್ನಡ ಗೀತೆಗಳ ಸಮೂಹ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- Friday
- November 1st, 2024