Ad Widget

ಪಂಜ: ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ 2021- 22ರ ವಾರ್ಷಿಕ ಮಹಾಸಭೆಯು ಅ.28ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

. . . . . . . . .

ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾದ ಶ್ರೀ ರಾಮಶೇಷ ಶೆಟ್ಟಿ, ಜಿಲ್ಲಾ ಸಂಸ್ಥೆಯ ಗೈಡ್ ಆಯುಕ್ತರಾದ ಶ್ರೀಮತಿ ಶುಭಾ ವಿಶ್ವನಾಥ್, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಶ್ರೀ ಎಂ ಜಿ ಕಜೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ, ಕೋವಿಡ್ ಕಾರಣದಿಂದ ಭೌತಿಕ ಚಟುವಟಿಕೆಗಳನ್ನು ನಡೆಸಲು ಅಸಾಧ್ಯವಾಗಿರುವ ಈ ಸಮಯದಲ್ಲಿ ಪಂಜ ಸ್ಥಳಿಯ ಸಂಸ್ಥೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ಮುಂದಿನ ದಿನಗಳಲ್ಲಿ ನಡೆಸಬಹುದಾದ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

. . . . . . .

ಜಿಲ್ಲಾ ಸಂಘಟಕ ಶ್ರೀ ಭರತ್ ರಾಜ್ ರಾಜ್ಯ ಸಂಸ್ಥೆಯ ಹಾಗೂ ಜಿಲ್ಲಾ ಸಂಸ್ಥೆಯ ಕಾರ್ಯಸೂಚಿಯನ್ನು ತಿಳಿಸಿದರು.
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ ಮತ್ತು ಪಂಜ , ಎಣ್ಮೂರು ಕ್ಲಸ್ಟರ್ ನ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀ ಜಯಂತ ಕೆ ಉಪಸ್ಥಿತರಿದ್ದು, ಶುಭಹಾರೈಸಿದರು. ಜಿಲ್ಲಾ ಉಪಾಧ್ಯಕ್ಷೆ ಜಿಲ್ಲಾ ಗೈಡ್ ಸಹಾಯಕ ಆಯುಕ್ತರಾದ ಶ್ರೀಮತಿ ವಿಮಲಾ ರಂಗಯ್ಯ ಮತ್ತು ಜಿಲ್ಲಾ ಸ್ಕೌಟ್ ಸಹಾಯಕ ಆಯುಕ್ತರಾದ ಶ್ರೀ ದೇವಿಪ್ರಸಾದ್ ಜಾಕೆ ಭಾಗವಹಿಸಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪಾಧ್ಯಕ್ಷರಾದ ಶ್ರೀ ದಾಮೋಧರ ಕೆ ಉಪಸ್ಥಿತರಿದ್ದರು.
2021ರ ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದ ಸ್ಕೌಟ್ಸ್ ಗೈಡ್ಸ್ ಶಿಕ್ಷಕರಿಗೆ ಮತ್ತು ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಭಿನಂದನಾ ಪತ್ರವನ್ನು ವಿತರಿಸಲಾಯಿತು.

2020-21ರ ಲೆಕ್ಕಪತ್ರವನ್ನು ಹಾಗೂ 2021-22ರ ಆಯವ್ಯಯ ಮುಂಗಡಪತ್ರವನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಶ್ರೀ ವಾಸುದೇವ ನಡ್ಕ ಸಭೆಗೆ ತಿಳಿಸಿ ಅನುಮೋದನೆ ಪಡೆದುಕೊಂಡರು.

2020-21ರ ವಾರ್ಷಿಕವರದಿ ಹಾಗೂ 2021-22 ರ ಯೋಜಿತ ಕಾರ್ಯಕ್ರಮಗಳನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಎಸ್ ಸಭೆಗೆ ತಿಳಿಸಿ ಅನುಮೋದನೆ ಪಡೆದುಕೊಳ್ಳುವುದರ ಜೊತೆಗೆ ಕಾರ್ಯಕ್ರಮವನ್ನು ನಿರೂಪಿಸಿದರು.
ಸ್ಥಳೀಯ ಸಂಸ್ಥೆಯ ಸಂಘಟಕ ಲಿಂಗಪ್ಪ ಬಿ ಸ್ವಾಗತಿಸಿ, ಸ್ಥಳೀಯ ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಶಿವಪ್ರಸಾದ್ ಜಿ ವಂದನಾರ್ಪಣೆಗೈದರು.

ವಾರ್ಷಿಕ ಮಹಾಸಭೆಯ ಬಳಿಕ ಸ್ಕೌಟ್ ಗೈಡ್ ಶಿಕ್ಷಕರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ- HWB ಸ್ಕೌಟರ್ ಸುಬ್ರಹ್ಮಣ್ಯ ಕೆ ಸಹಕರಿಸಿದರು. ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಸ್ಕೌಟ್ ಗೈಡ್, ಕಬ್ ಬುಲ್ ಬುಲ್ ಶಿಕ್ಷಕರು ಹಾಗೂ ರೋವರ್ ರೇಂಜರ್ ಉಪನ್ಯಾಸಕರು ಭಾಗವಹಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ಮಹಾವಿದ್ಯಾಲಯದ ರೋವರ್ಸ್ ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading