ಗ್ರೀನ್ ಝೋನ್ ನಲ್ಲಿದ್ದ ಉಡುಪಿಯಲ್ಲೀಗ ಕೊರೊನಾ ರುದ್ರನರ್ತನ ಶುರು ಮಾಡಿದೆ. ಒಂದು ವರ್ಷದ ಮಗು ಸೇರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 23 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ 130 ಮಂದಿಗೆ ಕೊರೊನಾ ಸೋಂಕು ವ್ಯಾಪಿಸಿದೆ.
ಬೆಳಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿ 97 ಮಂದಿಗೆ ಕೊರೊನಾ ಸೋಂಕಿರುವುದು ದೃಢಫಟ್ಟಿತ್ತು. ಸಂಜೆಯ ಬುಲೆಟಿನ್ ನಲ್ಲಿ ಕೊರೊನಾ ಸೋಂಕು ಮತ್ತೆ ಶಾಕ್ ಕೊಟ್ಟಿದ್ದು, ಹೊಸದಾಗಿ 43 ಮಂದಿಗೆ ಕೊರೊನಾ ಕಾಣಿಸಿಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆ 130ರ ಸಂಖ್ಯೆ ತಲುಪಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ.
ಕೊರೊನಾ ವೈರಸ್ ಉಡುಪಿ ಜಿಲ್ಲೆಗೆ ಶಾಕ್ ಕೊಟ್ಟಿದೆ. ಜಿಲ್ಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂಧಿಗಳಿಗೆ ಸೋಂಕು ಕಾಣಿಸಿಕೊಂಡಿತ್ತು. ಅಲ್ಲದೇ ಮುಂಬೈನಿಂದ ಆಗಮಿಸಿದ್ದ 1 ವರ್ಷದ ಮಗು ಸೇರಿದಂತೆ ಒಟ್ಟು 18 ಮಂದಿಗೆ ಸೋಂಕು ದೃಢಪಟ್ಟಿತ್ತು. ಆದ್ರೆ ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ 5 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಒಂದೇ ದಿನ 23 ಮಂದಿಗೆ ಕೊರೊನಾ ವ್ಯಾಪಿಸಿದ್ದು, ಕರಾವಳಿಗರಿಗೆ ಆತಂಕ ಮೂಡಿಸಿದೆ.
- Friday
- November 22nd, 2024