ಬಳ್ಪದ ಪಾದೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಂಡುಬಂದು ಸಂಪೂರ್ಣ ಸುಟ್ಟು ಹೋದ ಘಟನೆ ಇಂದು ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಹೊಗೆ ಕಾಣಿಸಿಕೊಂಡಿದೆ. ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದ ಘಟನೆ ನಡೆದಿದೆ.
- Tuesday
- December 3rd, 2024