
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗುತ್ತಿಗಾರು ಗ್ರಾಮಪಂಚಾಯತ್ ಹಾಗೂ ಮಾಹಿತಿ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಾಲೆಮಜಲು ಪ್ರಯಾಣಿಕರ ತಂಗುದಾಣದಲ್ಲಿ ಪುಸ್ತಕ ಗೂಡು ಉದ್ಘಾಟನೆ ಡಿ.08 ರಂದು ನಡೆಯಿತು.
ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿಗಳಾದ ಡಾ| ಕೆ.ಎಸ್.ಎನ್ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪುಸ್ತಕ ಗೂಡು ನಿರ್ಮಾಣಕ್ಕೆ ಸಹಕರಿಸಿದ ದಿನೇಶ್ ಹಾಲೆಮಜಲು ಹಾಗೂ ಕಲಾಚಿತ್ರಕಾರ ಸುರೇಶ್ ಬಳ್ಳಕರವರನ್ನು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷ ಅವರನ್ನು ಗೌರವಿಸಲಾಯಿತು.

ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಅವರು ಸ್ವಾಗತಿಸಿ, ಪರಶುರಾಮ ಚಿಲ್ತಡ್ಕ ವಂದಿಸಿದರು. ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸತೀಶ್ ಬಂಬುಳಿ ಕಾರ್ಯಕ್ರಮ ನಿರೂಪಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ