ಮಂಗಳೂರು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಯೋಗ್ಯವಾದ ಫಲಿತಾಂಶವನ್ನು ಘೋಷಿಸಬೇಕು. ಹಾಗೂ ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನಹರಿಸಿದ್ದು, ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ, ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೂ ಬಸ್ ಸೇವೆ ಪ್ರಾರಂಭಿಸಬೇಕು
ಹಾಗೂ ಡಿಪ್ಲೊಮಾ, ಇಂಜಿನಿಯರಿಂಗ್, ಸ್ನಾತಕೋತ್ತರ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಸಿಗದೇ ಪರದಾಡುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ತಕ್ಷಣ ಬಿಡುಗಡೆಗೊಳಿಸಬೇಕು.
ಹಾಗೂ ರಾಜ್ಯದ ಅನೇಕ ಬಡ ವಿದ್ಯಾರ್ಥಿಗಳು ಹಾಸ್ಟೇಲ್ ಗಳನ್ನು ಅವಲಂಬಿಸಿದ್ದು, ಹೊಸದಾಗಿ ಶಾಲಾ-ಕಾಲೇಜುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಅರಂಭವಾಗಿದ್ದು, ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆ ಮುಗಿಯದೇ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ಸರ್ಕಾರ ಈ ವಸತಿ ನಿಲಯಗಳ ಸಮಸ್ಯೆಯನ್ನು ಬಗೆಹರಿಸಬೇಕು.
ಈ ನಾಲ್ಕು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದ ವತಿಯಿಂದ ವನದುರ್ಗಾ ದೇವಸ್ಥಾನದ ಬಳಿ ಡಿ.13 ರಂದು ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಜಯಶ್ರೀ ಹಾಗೂ ಚುಂಚನಾ ಅವರು ಪ್ರತಿಭಟನೆಯ ಕುರಿತು ಮಾತನಾಡಿದರು. ಎ.ಬಿ.ವಿ.ಪಿ ನಗರ ಕಾರ್ಯದರ್ಶಿ ಇಲೈ ಅರಸ್ ಸ್ವಾಗತಿಸಿ, ನಿರೂಪಿಸಿದರು. ಧನ್ಯ ವಂದಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ