Ad Widget

ಅಬಕಾರಿ ಇಲಾಖೆಯ ಭರ್ಜರಿ ಬೇಟೆ – ಹಾಸ್ಟೆಲ್ ನಲ್ಲಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ – ಆರೋಪಿ ಪರಾರಿ

ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರಾಗಿದ್ದ ಪಲ್ಲತ್ತೂರಿನ ಮೊಯಿದ್ದೀನ್ ಕುಂಞಿ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಮೊಯಿದ್ದೀನ್ ಕುಂಞಿ ಎಂಬವರು ಕೊಠಡಿ ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರು. ಇಲ್ಲಿ ಗಾಂಜಾ ಸಂಗ್ರಹಿಸಿ‌ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ‌ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು.
ಕೊಠಡಿಯನ್ನು ತಪಾಸಣೆ ಮಾಡುವ ವೇಳೆ ಹನ್ನೊಂದುವರೆ ಕೆ.ಜಿ. ಗಾಂಜಾ ಪತ್ತೆಯಾಗಿದೆ. ಈ ವೇಳೆ ಮನೆಯೊಳಗಿದ್ದ ಮೊಯಿದ್ದೀನ್ ಕುಂಞಿ ಪರಾರಿಯಾಗಿದ್ದು ಸಲಹುದ್ದೀನ್ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯ ಕಾರನ್ನು ಕೂಡಾ ವಶಕ್ಕೆ ಪಡೆದಿದ್ದು ಅದರಲ್ಲಿ ಕೂಡಾ 1 ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

. . . . . . . . .

ಅಬಕಾರಿ ಉಪಾಧೀಕ್ಷಕರಾದ ಶಿವಪ್ರಸಾದ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ ಪೈ, ಸುಳ್ಯ ಅಬಕಾರಿ ನಿರೀಕ್ಷಕಿ ರಾಧಾ, ಸಿಬ್ಬಂದಿಗಳಾದ ವಿಜಯಕುಮಾರ್, ಪ್ರೇಮಾನಂದ, ಯಲ್ಲಪ್ಪ, ಪ್ರಶಾಂತ್, ಶರಣಪ್ಪ, ಅಮರೇಶ್, ಅಶೋಕ್, ಶರತ್, ತಿಪ್ಪೇಸ್ವಾಮಿ, ನೀಲಾಧರ ಮತ್ತಿತರರು ಕಾರ್ಯಾಚರಣೆ ಯಲ್ಲಿದ್ದರು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading