15 ರಿಂದ18 ವರ್ಷದ ಮಕ್ಕಳಿಗೆ ಲಸಿಕೀಕರಣಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜ.03 ರಂದು ಚಾಲನೆ ನೀಡಲಾಯಿತು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ ಮಾತನಾಡಿ, ಕೋವಿಡ್ ಎದುರಿಸಲು, ಅದರಿಂದ ರಕ್ಷಣೆ ಪಡೆಯಲು ಲಸಿಕೀಕರಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 101541 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ. ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು ಜನತೆಯ ಕರ್ತವ್ಯ. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಯೂ ಇದೆ. ಇಂತಹ ಪರಿಸ್ಥಿತಿ ಎದುರಾಗದಂತೆ ಮುಂದುವರಿಯಲು ಎಲ್ಲರ ಸಹಕಾರ ಅಗತ್ಯ ಎಂದರು.
ಇಂದನ ಸಚಿವ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಸನ್ನ ದರ್ಭೆ, ಶೋಭಾ ಗಿರಿಧರ್, ವನಜಾ ಭಟ್, ಪ್ರಾಂಶುಪಾಲ ಸೋಮಶೇಖರ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ತ್ರಿಮೂರ್ತಿ, ವಿದ್ಯುತ್ ನಿಗಮ ಅಧ್ಯಕ್ಷ ಶರತ್, ಮೆಸ್ಕಾಂ ಮಂಡಳಿ ನಿರ್ದೇಶಕ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ