ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ತರಗತಿ ನಡೆಯದ ಕಾರಣ ತೊಂದರೆಯಾಗುತ್ತಿದೆ ಹಾಗೂ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ, ತರಗತಿಗಳು ಯಥಾವತ್ತಾಗಿ ನಡೆಯಬೇಕೆಂದು ಒತ್ತಾಯಿಸಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಹಶೀಲ್ದಾರ್ ಅನಿತಾಲಕ್ಷ್ಮೀ ಹಾಗೂ ಸಚಿವರುಗಳಾದ ಎಸ್.ಅಂಗಾರ ಮತ್ತು ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
- Wednesday
- December 4th, 2024